ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ಗಣೇಶ್ ಜಾಮೀನು ಅರ್ಜಿ ವಿಚಾರಣೆ – ಕಹಳೆ ನ್ಯೂಸ್
ಬೆಂಗಳೂರು : ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕ ಸದಸ್ಯ ಪೀಠ ಇಂದು ಗಣೇಶ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಇದು ಚುನಾವಣೆಯ ಸಮಯವಾಗಿದ್ದು, ಆದಷ್ಟು ಬೇಗ ಅರ್ಜಿ ವಿಚಾರಣೆ ಮುಗಿಸಿ, ಜಾಮೀನು ನೀಡುವಂತೆ ಇತ್ತೀಚೆಗಷ್ಟೇ ಗಣೇಶ್ ಹೈಕೋರ್ಟ್ ಗೆ ಮನವಿ ಮಾಡಿ, ಅರ್ಜಿ ಸಲ್ಲಿಸಿದ್ದರು. ಪ್ರತಿವಾದ ಮಂಡಿಸಲು ಕಾಲಾವಕಾಶ ಕೇಳಿದರು. ಹೀಗಾಗಿ ಹೈಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.
ಈ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಹೊಸಪೇಟೆಯ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜಿ.ಎನ್.ಗಣೇಶ್ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಗಲಾಟೆ ನಡೆದು ಒಂದು ತಿಂಗಳ ಬಳಿಕ ಕಂಪ್ಲಿ ಗಣೇಶ್ ಅವರನ್ನು ಬಿಡದಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿದ್ದರು.