ಮಂಡ್ಯ – ಏಪ್ರಿಲ್ ೧೮ರಂದು ಮಂಡ್ಯದಲ್ಲಿ ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಮಂಡ್ಯ ಜಿಲ್ಲೆಯ ಚುನಾವಣಾ ಕಣ ಈಗಾಗಲೇ ರಂಗೇರಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರು ಮಂಡ್ಯದಲ್ಲಿ ಎದುರಾಳಿಗಳು.
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೆ.ಅಣ್ಣಾಮಲೈ ಅವರನ್ನು ಮಂಡ್ಯ ಚುನಾವಣೆ ಸಾಮಾನ್ಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಚುನಾವಣಾ ಆಯೋಗ ಕೆ.ಅಣ್ಣಾಮಲೈ ಅವರನ್ನು ಮೇಲುಕೋಟೆ, ನಾಗಮಂಗಲ, ಕೆ.ಆರ್.ಪೇಟೆ ಮತ್ತು ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾಗಿ ನೇಮಕ ಮಾಡಿದೆ.
ಚುನಾವಣಾ ಅಕ್ರಮಗಳ ಬಗ್ಗೆ ನಿಗಾವಹಿಸಲು ಚುನಾವಣಾ ಆಯೋಗ ವೀಕ್ಷಕರನ್ನು ನೇಮಕ ಮಾಡುತ್ತದೆ. ಮಂಡ್ಯ ಕ್ಷೇತ್ರ ಜಿದ್ದಾಜಿದ್ದಿನಿಂದ ಕೂಡಿರುವುದರಿಂದ ದಕ್ಷ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ಸಾಮಾನ್ಯ ವ ವೀಕ್ಷಕರನ್ನಾಗಿ ನೇಮಕ ಮಾಡಿದೆ. ಮಂಡ್ಯ ಜಿಲ್ಲಾ ಚುನಾವಣಾ ಪುಟ ವೀಕ್ಷಕರ ನೇಮಕ : ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಐಎಎಸ್ ಅಧಿಕಾರಿ ರಂಜಿತ್ ಕುಮಾರ್ ಹಾಗೂ ರಾಣಿ ನಗರ್ ಅವರು ಚುನಾವಣಾ ವೀಕ್ಷಕರಾಗಿ ಆಯೋಗದಿಂದ ನೇಮಕವಾಗಿದ್ದಾರೆ. ಮೇಲುಕೋಟೆ, ನಾಗಮಂಗಲ, ಕೆ.ಆರ್.ಪೇಟೆ ಹಾಗೂ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರಗಳಿಗೆ ರಂಜಿತ್ ಕುಮಾರ್ ಮಳವಳ್ಳಿ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ರಾಣಿ ನಗರ್ Ãಕ್ಷಕರಾಗಿದ್ದಾರೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಅಹವಾಲುಗಳಿದ್ದಲ್ಲಿ ಸಾರ್ವಜನಿಕರು ಹಾಗೂ ಅಭ್ಯರ್ಥಿಗಳು ಚುನಾವಣಾ ವೀಕ್ಷಕರ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಏಪ್ರಿಲ್ ೧೮ರಂದು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಕಣದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸದೇ ಸುಮಲತಾ ಅವರಿಗೆ ಬೆಂಬಲ ಘೋಷಣೆ ಮಾಡಿದೆ.