ಸುಬ್ರಹ್ಮಣ್ಯ : ಕುಮಾರಧಾರ ನದಿಯಲ್ಲಿ ವಿವಾಹಿತ ಸುಮಾರು ೪೫ ವರ್ಷ ಪ್ರಾಯದ ಮಹಿಳೆಯ ಶವ ಪತ್ತೆಯಾಗಿದೆ.
ಇಂದು ಮಧ್ಯಾಹ್ನ ನದಿಯಲ್ಲಿ ಶವವೊಂದು ತೇಲುತ್ತಿರುವುದನ್ನು ಕಂಡು ಸಾರ್ವಜನಿಕರು ತಕ್ಷಣ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ತಕ್ಷಣ ಧಾವಿಸಿ ನೀರಿನಲ್ಲಿ ತೇಲುತ್ತಿದ್ದ ಶವವನ್ನ ಮೇಲೆತ್ತಿ ತನಿಖೆ ನಡೆಸುತ್ತಿದ್ದಾರೆ. ಈ ಮಹಿಳೆ ಯಾರು ಎಂಬುದು ಇನ್ನಷ್ಟೇ ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.