ಮೈಸೂರು: ನಾಡು ನುಡಿ ರಕ್ಷಣೆಗೆ ಸಂಬಂಧಿಸಿದಂತೆ ರಣಕಹಳೆ ಮೊಳಗಿಸುತ್ತಿದ್ದ ಸಾಹಿತ್ಯ ಸಮ್ಮೇಳನದಂತ ಅಗ್ರ ವೇದಿಕೆಯಲ್ಲಿ ರಾಜಕೀಯ ಪ್ರಸ್ತಾಪವಾಗಿರುವುದು ಸಾಹಿತ್ಯಾಭಿಮಾನಿಗಳಿಗೆ ಬೇಸರ ತರಿಸಿದೆ.
ಇಂತದ್ದೊಂದು ಕಹಿ ಘಟನೆ ನಡೆದಿದ್ದು, ಇಂದು ಆರಂಭವಾದ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಗ್ರ ವೇದಿಕೆಯಲ್ಲಿ. ಅದುವೇ ಸ್ವತಃ ಸಮ್ಮೇಳನದ ಸರ್ವಾಧ್ಯಕ್ಷರು ಇಂತದ್ದೊಂದು ಅಪಥ್ಯ ವಿಚಾರವನ್ನು ಪ್ರಸ್ತಾಪಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ನಾಗರಿಕರಲ್ಲದೆ ರಾಜಕಾರಣಿಗಳೂ ಕೂಡ ಅಧ್ಯಕ್ಷರ ನಿಲುವಿಗೆ ಕಿಡಿಕಾರಿದ್ದಾರೆ.
ಸಾಹಿತ್ಯ ಸಮ್ಮೇಳನದ ಅದ್ಯಕ್ಷರಾಗಿರುವ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸುವಂತೆ ಬಹಿರಂಗವಾಗಿ ಮತಯಾಚನೆ ಮಾಡಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಮೊದಲ ಬಾರಿಗೆ ಸಮ್ಮೇಳನಾಧ್ಯಕ್ಷರೇ ರಾಜಕೀಯ ಪ್ರೇರಿತವಾಗಿ ಮಾತನಾಡಿ, ಕಳಂಕಿತ ಸಚಿವರನ್ನು ಕೈಬಿಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ವಿರುದ್ಧವೂ ಚಂಪಾ ವಾಗ್ದಾಳಿ ನಡೆಸಿದ್ದಾರೆ.