Sunday, January 19, 2025
ಸುದ್ದಿ

ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಪಾತ್ರರಾದ ಮೋದಿ: ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆಯುತ್ತಿರುವ ಭಾರತದ ಮೊದಲ ಪ್ರಧಾನಿ – ಕಹಳೆ ನ್ಯೂಸ್

ಏಪ್ರಿಲ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ನೀಡುವ ಅತ್ಯುನ್ನತ ನಾಗರಿಕ ಪುರಸ್ಕಾರ `ಝಾಯೆದ್ ಮೆಡಲ್’ ಪುರುಸ್ಕಾರಕ್ಕೆ ಭಾಜನರಾಗಿದ್ದರು. ಇದೀಗ ಮತ್ತೊಂದು ಪ್ರಶಸ್ತಿಗೆ ಮೋದಿ ಪಾತ್ರರಾಗಿದ್ದಾರೆ.

ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದ ಅಪೋಸ್ಲ್’ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಜನರಾಗಿದ್ದಾರೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶುಕ್ರವಾರ ಘೋಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತ ಮತ್ತು ರಷ್ಯಾದ ಸಂಬಂಧ ಸುಧಾರಣೆಗೆ ಶ್ರಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಈ ಪ್ರತಿಷ್ಠಿತ ಗೌರವ ನೀಡಲಾಗಿದೆ ಎಂದು ರಷ್ಯಾ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನಿ ಮೋದಿ ಅವರು ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆಯುತ್ತಿರುವ ಭಾರತದ ಮೊದಲ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಹಿಂದೆ ಈ ಪ್ರಶಸ್ತಿಯನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್, ಅಜರ್ ಬೈಜಾನ್ ಪ್ರಧಾನಿ ಹೈದರ್ ಅಲಿಯಾವ್, ಕಜಕಿಸ್ತಾನದ ಅಧ್ಯಕ್ಷ ನುರ್ಸುಲ್ಟಾನ್ ನಜರ್ಬಯೆವ್ ಅವರಿಗೆ ಸಿಕ್ಕಿತ್ತು.