Recent Posts

Sunday, January 19, 2025
ರಾಜಕೀಯಸುದ್ದಿ

ರಾಹುಲ್ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ಮೋದಿ ಅವರನ್ನು ಚೌಕಿದಾರ್ ಚೋರ್ ಹೈ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ರಫೇಲ್ ಯುದ್ಧ ವಿಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ತೀರ್ಪಿನ ಪರಿಶೀಲನೆಗಾಗಿ ಕೇಂದ್ರ ಸರ್ಕಾರವು ಸಲ್ಲಿಸಿದ ಪ್ರಾಥಮಿಕ ಆಕ್ಷೇಪವನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದ ಬಳಿಕ ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಚೌಕಿದಾರ್ ಚೋರ್ ಎಂದು ಹೇಳಿದ್ದರು. ಹೀಗಾಗಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಏ. 15 ರಂದು ಕೈಗೆತ್ತಿಕೊಳ್ಳಲಿದೆ ಎನ್ನಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು