Saturday, November 23, 2024
ಸುದ್ದಿ

ವಿವೇಕಾನಂದ ಕಾಲೇಜು: “ಮಣಿಕರ್ಣಿಕ” ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಮಾತುಗಾರಿಕೆ ವಿದ್ಯಾರ್ಥಿಗಳಲ್ಲಿ ಇರಬೇಕಾದ ಪ್ರಮುಖ ಅಂಶ. ಮಾತುಗಾರಿಕೆ ಎಂಬುದು ಜೀವನವನ್ನು ನಡೆಸುವುದರಿಂದ ಹಿಡಿದು ಉದ್ಯೋಗ, ವ್ಯವಹಾರ ಹೀಗೆ ಎಲ್ಲ ಕ್ಷೇತ್ರದಲ್ಲೂ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಸಮರ್ಥವಾಗಿ ಒಂದು ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸುವ ಕಲೆಯನ್ನು ಬೆಳೆಸಬೇಕು. ಈ ಕೆಲಸವನ್ನು ಪತ್ರಿಕೋದ್ಯಮ ವಿಭಾಗದ ಮಣಿಕರ್ಣಿಕ ವೇದಿಕೆಯ ಮೂಲಕ ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಶ್ರೀಧರ್ ಎಚ್.ಜಿ. ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಪದವಿ ಪತ್ರಿಕೋದ್ಯಮ ವಿಭಾಗದ “ಮಣಿಕರ್ಣಿಕ” ಮಾತುಗಾರರ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳ ಪ್ರತಿಭೆಗಳಿಗೆ ನಾನಾ ರೀತಿಯಲ್ಲಿ ಪ್ರೋತ್ಸಾಹ, ಸಹಕಾರವನ್ನು ನೀಡುವ ನಿಟ್ಟಿನಲ್ಲಿ ಇಂತಹ ಹಲವು ಕಾರ್ಯಕ್ರಮ, ಸಂಘಟನೆಗಳು ಕಾಲೇಜಿನಲ್ಲಿ ಕಾರ್ಯಚರಿಸುತ್ತಿದೆ. ಅದರಲ್ಲಿ ಇದೂ ಒಂದು. ಹಾಗಾಗಿ ಮಾತನ್ನೇ ಅಸ್ತ್ರವನ್ನಾಗಿಸಿ ಮುಂದಿನ ಜೀವನದಲ್ಲಿ ಉತ್ತಮ ಕೆಲಸವನ್ನು ಪಡೆಯುವಲ್ಲಿ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇಂತಹ ವೇದಿಕೆ ಸಹಕಾರಿ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಮಾತನಾಡಿ, ಈ ಸಾಲಿನ ಮಣಿಕರ್ಣಿಕ ವೇದಿಕೆಯಲ್ಲಿ ಅಡಿಯಲ್ಲಿ ನಡೆದ ಎಲ್ಲಾ ಕಾರ್ಯಕ್ರಮಗಳು ಬಹಳ ಉತ್ತಮವಾಗಿ ನಡೆದಿದೆ. ಇದಕ್ಕೆ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಆಸಕ್ತಿ ಪ್ರಮುಖವಾಗಿದೆ. ಹಾಗೂ ವಿದ್ಯಾರ್ಥಿಗಳು ಇದರ ಉಪಯೋಗವನ್ನು ಪಡೆದುಕೊಂಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಇಂಗ್ಲಿಷ್ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯಾ ಪಿ. ಆರ್. ನಿಡ್ಪಳ್ಳಿ, ವಿದ್ಯಾರ್ಥಿಗಳಾದ ಅರುಣ್ ಕುಮಾರ್, ಮೇಘಾ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹರ್ಷಿತಾ ಮತ್ತು ತಂಡ ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಪ್ರಶಾಂತ್ ಸ್ವಾಗತಿಸಿ, ಹರ್ಷಿತಾ ವಂದಿಸಿದರು. ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.