Recent Posts

Saturday, September 21, 2024
ಸುದ್ದಿ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಹೊರಬೀಳಲಿದೆ. ಇದಕ್ಕೆ ಕರ್ನಾಟಕ ಪಿಯುಸಿ ಬೋರ್ಡ್ ಎಲ್ಲಾ ತಯಾರಿ ನಡೆಸಿದೆ.

ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಒಟ್ಟು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋರ್ಡ್‍ನಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12 ಗಂಟೆಗೆ ವೆಬ್‍ಸೈಟ್‍ನಲ್ಲಿ ಫಲಿತಾಂಶ ಹೊರಬರಲಿದೆ.

ಜಾಹೀರಾತು