Recent Posts

Sunday, September 22, 2024
ಸುದ್ದಿ

ಸೈಕಲ್ ಏರಿ ಮತದಾನದ ಜಾಗೃತಿ ಮೂಡಿಸಿದ ಸಂಜೀವ್ ಕುಮಾರ್

ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಕಂಠೀರವ ಸ್ಟೇಡಿಯಂನಿಂದ ಆರಂಭವಾದ ಸೈಕಲ್ ಜಾಥಾಗೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹಾಗೂ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಅವರು ಚಾಲನೆ ನೀಡಿದರು.
ರಾಜ್ಯ ಮುಖ್ಯಚುನಾವಣಾಧಿಕಾರಿಗಳ ಕಚೇರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಂಟಿಯಾಗಿ ಹಮ್ಮಿಕೊಂಡಿದ್ದ ಸೈಕಲ್ ಸವಾರಿ ಜಾಥಾಗೆ ಚಾನಲೆ ನೀಡಲಾಯಿತು.

ಮತದಾರರ ಜಾಗೃತಿಯ ಫಲಕಗಳೊಂದಿಗೆ ಒಟ್ಟಾಗಿ ಸೈಕಲ್ ಸವಾರರು ಸಂಚರಿಸಿದ್ದು ಆಕರ್ಷಣೀಯವಾಗಿತ್ತು. ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು. ಸುಮಾರು 30 ಕಿ.ಮೀ ಸೈಕಲ್ ಜಾಥಾ ಕ್ರಮಿಸಿದ್ದು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಈಗಾಗಲೇ ಚುನಾವಣಾ ಆಯೋಗ ವಿವಿಧ ಸಂಘಸಂಸ್ಥೆಗಳು ಮತದಾನದ ಪ್ರಮಾಣ ಹೆಚ್ಚಿಸಲು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಾ ಬಂದಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾರಿಗೆ ಸಂಸ್ಥೆಗಳ ಬಸ್ ನಿಲ್ದಾಣ, ಬಸ್ ಟಿಕೆಟ್ನಲ್ಲೂ ಕೂಡ ಮತದಾನದ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೆ ಹೋಟೆಲ್ ಸೇರಿದಂತೆ ಕೆಲವು ಸಂಘಸಂಸ್ಥೆಗಳು ಕೂಡ ಮತದಾನದ ಮಹತ್ವದ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುತ್ತಿವೆ. ಕಲಾವಿದರಿಂದ ಚಿತ್ರಬಿಡಿಸುವಿಕೆ, ಬೀದಿ ನಾಟಕ, ಮೆರವಣಿಗೆ, ಘೋಷ ವಾಕ್ಯಗಳು ಸೇರಿದಂತೆ ನಾನಾ ರೀತಿಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿ ಪ್ರತಿಯೊಬ್ಬರು ಮತದಾನ ಮಾಡುವಂತೆ ಉತ್ತೇಜಿಸಲಾಗುತ್ತಿದೆ.

ಜಾಹೀರಾತು