Monday, January 20, 2025
ಸುದ್ದಿ

ಬಜರಂಗದಳದ ನೀತಿನ್ ನಿಡ್ಪಳ್ಳಿ ಅವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ – ಕಹಳೆ ನ್ಯೂಸ್

ಕೆಲ ದಿನಗಳ ಹಿಂದೆ ತೀವ್ರಾ ಅನಾರೋಗ್ಯದ ಕಾರಣ ಸ್ವರ್ಗಸ್ಥರಾದ ಬಜರಂಗದಳದ ಪುತ್ತೂರು ಪ್ರಖಂಡ ಸಂಚಾಲಕರಾದ ನೀತಿನ್ ನಿಡ್ಪಳ್ಳಿ ಇವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವು ದಿನಾಂಕ 14-4-2019 ರಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಲಯ ವಜ್ರಸಂಜೀವಿನಿ ಇದರಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಶ್ರದ್ಧಾಂಜಲಿ ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ದಿ.ನೀತಿನ್ ನಿಡ್ಪಳ್ಳಿ ಇವರ ಬಗ್ಗೆ ಪ್ರಾಸ್ತಾವಿಕ ವಾಗಿ ಮಾತನಾಡಿದರು, ಬಜರಂಗದಳದ ಪ್ರಾಂತ ಸಹ ಸಂಚಾಲಕ್ ಮುರಳಿ ಕೃಷ್ಣ ಹಸಂತ್ತಡ್ಕ ಇವರು ನುಡಿ ನಮನ ಸಲ್ಲಿಸಿದರು, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ ಎಸ್, ಜಿಲ್ಲಾ ಸಹ ಕಾರ್ಯದರ್ಶಿ ಗೋವರ್ಧನ್ ವಿಟ್ಲ, ಬಜರಂಗದಳದ ಪುತ್ತೂರು ಜಿಲ್ಲಾ ಸಂಚಾಲಕ ಶ್ರೀಧರ್ ತೆಂಕಿಲ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಕಾರ್ಯದರ್ಶಿ ನವೀನ್ ಕುಲಾಲ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ನ್ಯಾಯವಾದಿ ಪ್ರಮುಖ್ ಮಾಧವ ಪೂಜಾರಿ ಹಾಗೂ ಮಾತೃಶಕ್ತಿ ದುರ್ಗಾ ವಾಹಿನಿಯ ಪ್ರಮುಖೆಯರು, ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪುತ್ತೂರು ಪ್ರಖಂಡ ದ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು