Monday, January 20, 2025
ಕ್ರೀಡೆಸುದ್ದಿ

ಮುಂಬೈಗೆ ನೀರು ಕುಡಿಸುತ್ತಾ ಸೋಲಿನ ಸುಳಿಯಿಂದ ಹೊರಬಂದ ಆರ್.ಸಿ.ಬಿ.? – ಕಹಳೆ ನ್ಯೂಸ್

ಮುಂಬೈ: ಸತತ 6 ಸೋಲಿನ ಬಳಿಕ 7ನೇ ಐಪಿಎಲ್ ಪಂದ್ಯದಲ್ಲಿ ಗೆಲುವು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.)ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಆರ್.ಸಿ.ಬಿ. ಮುಖಾಮುಖಿಯಾಗಲಿವೆ.

ಸೋಲಿನ ಸುಳಿಯಿಂದ ಹೊರ ಬಂದಿರುವ ಆರ್.ಸಿ.ಬಿ. ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಂಡಿದೆ. ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯವನ್ನು ಗೆಲ್ಲುವ ತವಕದಲ್ಲಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಪೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಕಳೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ರು. ಪಾಯಿಂಟ್ ಪಟ್ಟಿಯಲ್ಲಿ ಕೊನೆಯಲ್ಲಿರುವ ಆರ್.ಸಿ.ಬಿ. ಪ್ಲೇ ಆಫ್ ಕನಸು ಜೀವಂತವಾಗಿರಲು ಇಂದಿನ ಪಂದ್ಯವನ್ನು ಕೂಡ ಗೆಲ್ಲಲೇ ಬೇಕಿದೆ. ಇನ್ನು ಕಳೆದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಸೋತಿರುವ ಮುಂಬೈ ಇಂಡಿಯನ್ಸ್ ಮತ್ತೆ ಗೆಲುವಿನ ನಿರೀಕ್ಷೆಯಲ್ಲಿ ಆರ್.ಸಿ.ಬಿ.ಯನ್ನು ಎದುರಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು