Tuesday, January 21, 2025
ಸುದ್ದಿ

ಮಂಡ್ಯ ರಣ-ಕಣ : ಹಣ ಹಂಚಿಕೆ ತಡೆಯಲು ಚುನಾವಣಾ ಆಯೋಗದಿಂದ ಹದ್ದಿನ ಕಣ್ಣು! – ಕಹಳೆ ನ್ಯೂಸ್

ಮಂಡ್ಯ : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಕೊನೆ ದಿನದಲ್ಲಿ ಕೋಟಿ ಕೋಟಿ ಹಣದ ಹೊಳೆ ಹರಿಯುವ ಸಾಧ್ಯತೆ ಇದೆ ಎನ್ನುವ ಸುದ್ದಿಯ ಬೆನ್ನಲ್ಲೇ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ಸೆಕ್ಯೂರಿಟಿ ಫುಲ್ ಟೈಟ್ ಆಗಿದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಡುವೆ ಬಿಗ್ ಫೈಟ್ ನಡೆಯುತ್ತಿದೆ.

ಈ ನಿಟ್ಟಿನಲ್ಲಿ ಎರಡೂ ಅಭ್ಯರ್ಥಿಗಳ ಕಡೆಯಿಂದ ಕೋಟಿ ಕೋಟಿ ಹಣ ಹಂಚಿಕೆಯಾಗಲಿದೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ನಿಟ್ಟಿನಲ್ಲಿ ಹಣದ ಹೊಳೆಯನ್ನು ತಡೆಗಟ್ಟಲು ಚುನಾವಣಾ ಆಯೋಗದ ಜೊತೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ ಎನ್ನಲಾಗಿದೆ. ಚುನಾವಣಾಧಿಕಾರಿಗಳು ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಚೆಕ್ ಪೋಸ್ಟ್ ಗಳಲ್ಲೂ ವಾಹನಗಳ ತಪಾಸಣೆ ನಿರಂತರವಾಗಿ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು