Wednesday, January 22, 2025
ಸುದ್ದಿ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ : ಸ್ಪಷ್ಟನೆ ನೀಡಿದ ದರ್ಶನ್ – ಕಹಳೆ ನ್ಯೂಸ್

ಮಂಡ್ಯ ಲೋಕಸಭಾ ಚುನಾವಣೆ ರಂಗೇರುತ್ತಿದ್ದು, ಹೊಸ ಹೊಸ ತಿರುವನ್ನ ಪಡೆದುಕೊಳ್ಳುತ್ತಲೆ ಇದೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರೋದು ಗೊತ್ತಿರೋ ವಿಚಾರ. ಇದು ಸಹಜವಾಗಿಯೇ ಕೆಲವರ ಕಣ್ಣು ಕೆಂಪಗಾಗಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ಕೆಲವರು ನೀಡಿರುವ ದೂರಿನ ಮೇರೆಗೆ ಇಂದು ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿರುವ ದರ್ಶನ್ ಅವರ ಫಾರ್ಮ್ ಹೌಸ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆಂಬ ಮಾಹಿತಿ ಹೊರ ಬಿದ್ದಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ದರ್ಶನ್, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿಲ್ಲ. ಬದಲಾಗಿ ಚುನಾವಣಾ ಆಯೋಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿ ಚುನಾವಣೆಗೆ ಸಂಬಂಧಪಟ್ಟ ಯಾವುದೇ ಚಟುವಟಿಕೆ ನಡೆಯುತ್ತಿರುವುದು ಕಂಡು ಬಾರದ ಕಾರಣ ಹಿಂದಿರುಗಿದ್ದಾರೆ ಎಂದು ತಿಳಿಸಿದ್ದಾರೆ.