Thursday, January 23, 2025
ಸುದ್ದಿ

ಐಸಿಸಿ ವಿಶ್ವಕಪ್ 2019ಕ್ಕೆ ಟೀಮ್ ಇಂಡಿಯಾ ಪ್ರಕಟ – ಕಹಳೆ ನ್ಯೂಸ್

ಐಪಿಎಲ್ ಜ್ವರ ಜೋರಾಗಿರುವ ಹೊತ್ತಲ್ಲೇ ಮೇ 30ಕ್ಕೆ ಇಂಗ್ಲೆಂಡ್‍ನಲ್ಲಿ ಆರಂಭವಾಗಲಿರುವ ವಿಶ್ವಕಪ್‍ಗೆ ಭಾರತ ತಂಡದ ಪ್ರಕಟವಾಗಿದೆ. ರನ್ ಮೆಷಿನ್ ವಿರಾಟ್ ಕೊಹ್ಲಿ ವಿಶ್ವಕಪ್‍ಗೆ ಭಾರತ ಕ್ರಿಕೆಟ್ ತಂಡದ ನಾಯಕನಾದರೆ, ಹಿಟ್ಟರ್ ರೋಹಿತ್ ಶರ್ಮ ಉಪನಾಯಕನಾಗಿ ತಂಡವನ್ನು ಮುನ್ನಡಿಸಲಿದ್ದಾರೆ. ರೋಹಿತ್ ಜೊತೆ ಶಿಖರ್ ಧವನ್ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ. ವಿಕೆಟ್ ಕೀಪರ್ ಆಗಿ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಆಲ್ ರೌಂಡರ್‌ಗಳಾದ ಕೇದಾರ್ ಜಾದವ್, ವಿಜಯ್ ಶಂಕರ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ ತಂಡದ ಬಲವನ್ನು ಹೆಚ್ಚಿಸಲಿದ್ದಾರೆ. ಜೊತೆಗೆ ಕನ್ನಡಿಗ ಕೆ.ಎಲ್.ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವುದು ವಿಶೇಷ. ಇನ್ನು ಟಾಪ್ ಆರ್ಡರ್‍ನಲ್ಲಿ ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮಹಮ್ಮದ್ ಶಮಿ, ಯಜುವೇಂದ್ರ ಚಾಹಲ್ ಮತ್ತು ಕುಲ್‍ದೀಪ್ ಯಾದವ್ ಬೌಲಿಂಗ್ ಮೂಲಕ ಎದುರಾಳಿ ತಂಡವನ್ನು ಅಲ್ಪ ಮೊತ್ತಕ್ಕೆ ಕುಸಿಯಲು ಸಜ್ಜಾಗಲಿದ್ದಾರೆ. ಇನ್ನು ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5ಕ್ಕೆ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು