Beer in an environment
ಲೋಕಸಭಾ ಚುನವಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಲ್ಲಿ ಲೋಕಸಭೆ ಚುನಾವಣೆ 2 ಹಂತದಲ್ಲಿ ನಡೆಯಲಿದ್ದು, ಏಪ್ರಿಲ್ 18 ಮತ್ತು ಏಪ್ರಿಲ್ 23 ರಂದು ಮತದಾನ ನಡೆಯಲಿದೆ.
ಮೊದಲ ಹಂತದ ಲೋಕಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಮೊದಲ ಹಂತದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದಿನಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದೆ.
ಏಪ್ರಿಲ್ 16 ರ ಸಂಜೆ 6 ಗಂಟೆಯಿಂದ ಮದ್ಯ ಮಾರಾಟ ನಿಷೇಧಿಸಿದ್ದು, ಏಪ್ರಿಲ್ 19 ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧ ಜಾರಿಯಲ್ಲಿದೆ. ಅದೇ ರೀತಿ ರಾಜ್ಯದಲ್ಲಿ 2ನೇ ಹಂತದಲ್ಲಿ ಎಪ್ರಿಲ್ 23 ರಂದು 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೇ 23 ರಂದು ಫಲಿತಾಂಶದ ದಿನ ಬೆಳಗ್ಗೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.