ದ್ವಿತೀಯ ಪಿಯುಸಿ ಫಲಿತಾಂಶ ನಿನ್ನೆ ಹೊರಬಿದ್ದಿದೆ. ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಏಕ ಪ್ರಕಾರದಲ್ಲಿ ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.
ಮೂಡಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಒಲ್ವಿಟಾ ಅನ್ಸಿಲ್ಲಾ ಡಿಸೋಜಾ ಹಾಗೂ ವಿಟ್ಲ- ಅಳಿಕೆ ಸತ್ಯಸಾಯಿ ಲೋಕಸೇವಾ ಪಿಯು ಕಾಲೇಜಿನ ವಿದ್ಯಾರ್ಥಿ ಶ್ರೀಕೃಷ್ಣ ಶರ್ಮಾ ಕೆ. ತಲಾ 596(99.33 ಶೇ.)ಅಂಕಗಳನ್ನು ಗಳಿಸಿದ್ದಾರೆ.