ಸುಳ್ಯ: ಸುಳ್ಯ ಜ್ಞಾನದೀಪ ಶಿಕ್ಷಣ, ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಿಂದ ತರಗತಿಗಳನ್ನು ಪಡೆದು ಪರೀಕ್ಷೆಗೆ ಹಾಜರಾಗಿದ್ದ 14 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ 100 % ಫಲಿತಾಂಶ ದಾಖಲಾಗಿದೆ.
3 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ದ್ವೀತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಯುವರಾಜ್ (520), ಗ್ಲಾಡಿಸ್ ಫೆರ್ನಾಂಡಿಸ್ (518), ನಿತಿನ್(512) ವಿಶಿಷ್ಟ ಶ್ರೇಣಿಯಲ್ಲಿ ಪಾಸ್ ಆಗಿದ್ದಾರೆ.
ಬೆಳ್ಳಾರೆ ಜ್ಞಾನದೀಪ
ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ, ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಿಂದ ತರಗತಿಗಳನ್ನು ಪಡೆದು ಪರೀಕ್ಷೆಗೆ ಹಾಜರಾಗಿದ್ದ 39 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿಗಳು ತೇರ್ಗಡೆಯಾಗಿ 90 % ಫಲಿತಾಂಶ ದಾಖಲಾಗಿದೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಬರೆದ 21 ವಿದ್ಯಾರ್ಥಿಗಳ ಪೈಕಿ 19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶ್ರೀನಿಧಿ(484), ಕಾವ್ಯಶ್ರೀ(474), ನಿತೀಶ್ ಕುಮಾರ್(440) ಅತಿ ಹೆಚ್ಚು ಅಂಕಗಳನ್ನು ಗಳಿಸಿಕೊಂಡಿದ್ದಾರೆ.
ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 18 ಮಂದಿ ವಿದ್ಯಾರ್ಥಿಗಳ ಪೈಕಿ 16 ಮಂದಿ ತೇರ್ಗಡೆಗೊಂಡಿದ್ದಾರೆ. ಲಾವಣ್ಯ ಸುಧಾ (494), ಸಾಯಿಶ್ವೇತ(454), ಕವನಾ(432) ಅತೀ ಹೆಚ್ಚು ಅಂಕ ಗಳಿಸಿದ್ದಾರೆ.