Sunday, January 26, 2025
ಸುದ್ದಿ

ಚೌಕೀದಾರ್ ಚೋರ್ ಹೈ ಜಾಹೀರಾತು ನಿಷೇಧಿಸುವಂತೆ ಚುನಾವಣಾ ಆಯೋಗ ಆದೇಶ – ಕಹಳೆ ನ್ಯೂಸ್

ನವದೆಹಲಿ: ಚೌಕೀದಾರ್ ಚೋರ್ ಹೈ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ. ಚೌಕೀದಾರ್ ಚೋರ್ ಹೈ ಜಾಹೀರಾತನ್ನು ನಿಷೇಧಿಸುವಂತೆ ಚುನಾವಣಾ ಆಯೋಗವು ಆದೇಶವನ್ನು ಹೊರಡಿಸಿದೆ. ಮಧ್ಯಪ್ರದೇಶದ ಕಾಂಗ್ರೆಸ್ ಘಟಕವು ಚೌಕೀದಾರ್ ಚೋರ್ ಹೈ ಎನ್ನುವ ಜಾಹೀರಾತನ್ನು ಪ್ರಕಟಿಸುತ್ತಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಜಾಹೀರಾತನ್ನು ನಿರ್ಬಂಧಿಸಿ ಆದೇಶಿಸಲಾಗಿದೆ. ಚೌಕೀದಾರ್ ಚೋರ್ ಹೈ ಘೋಷಣೆಯು ಈಗಾಗಲೇ ಸುಪ್ರೀಂಕೋರ್ಟ್ ಹಾಗೂ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲನ್ನು ಹತ್ತಿದೆ. ಆಧಾರ ರಹಿತ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು