ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭೆ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ನಿಖಿಲ್ ಕೆ. ಸಂಸದರು ಎಂಬ ಬೋರ್ಡ್ – ಕಹಳೆ ನ್ಯೂಸ್
ಮಂಡ್ಯ : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭೆ ಚುನಾವಣೆಗೆ ನಿನ್ನೆ ಮತದಾನ ನಡೆದಿದ್ದು, ಫಲಿತಾಂಶಕ್ಕೂ ಮುನ್ನವೇ ನಿಖಿಲ್ ಕೆ. ಸಂಸದರು ಎಂಬ ಬೋರ್ಡ್ ಫೇಸ್‍ಬುಕ್‍ನಲ್ಲಿ ವೈರಲ್ ಆಗಿದೆ. ಕರ್ನಾಟಕ ಜೆಡಿಎಸ್ ಪಕ್ಷದ ಫೇಸ್‍ಬುಕ್ ಪೇಜ್ ಪೋಸ್ಟ್ನಲ್ಲಿ `ನಿಖಿಲ್ ಕೆ. ಸಂಸದರು. ಮಂಡ್ಯ ಲೋಕಸಭಾ ಕ್ಷೇತ್ರ’ ಎಂದು ಬರೆದಿರುವ ಬೋರ್ಡ್ ಅಭಿಮಾನಿಯಿಂದ ನಿಖಿಲ್ ಕುಮಾರಸ್ವಾಮಿ ಅವರಿಗೆ ಉಡುಗೊರೆ ಎಂದು ಬರೆಯಲಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸಿದ್ದಾರೆ. ಇದೀಗ ಈ ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ.