ಅಳ್ವಾಸ್ ನುಡಿಸಿರಿ ಪ್ರಶಸ್ತಿ ತಿರಸ್ಕರಿಸಿದ ದೊರೆಸ್ವಾಮಿ | ಧರ್ಮ ಸಂಸದ್ ನಲ್ಲಿ ಭಾಗವಹಿಸಿದ್ದಕ್ಕೆ ತಿರಸ್ಕಾರ
ಬೆಂಗಳೂರು: ಮಹತ್ವದ ವಿದ್ಯಮಾನವೊಂದರಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರು ಆಳ್ವಾಸ್ ನುಡಿಸಿರಿ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.
ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರು ಧರ್ಮಸಂಸದ್ ನಲ್ಲಿ ಭಾಗಿಯಾದ ಕಾರಣಕ್ಕೆ ಪ್ರಶಸ್ತಿಯನ್ನು ತಿರಸ್ಕರಿಸಿರುವುದಾಗಿ ದೊರೆಸ್ವಾಮಿ ಹೇಳಿದ್ದಾರೆ.
‘ಆಳ್ವ ಅವರು ಕಲೆ, ಸಾಹಿತ್ಯ, ಕ್ರಿಡೆಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯ ಬಗ್ಗೆ ಅಪಾರ ಗೌರವವಿದೆ ಆದರೆ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಪ್ರಶಸ್ತಿ ಸ್ವೀಕರಿಸುತ್ತಿಲ್ಲ’ ಎಂದಿದ್ದಾರೆ.
ಆಳ್ವ ಅವರು ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ನ ಪೋಷಕರ ಸಮಿತಿಯಲ್ಲಿ ಗುರುತಿಸಿಕೊಂಡಿದ್ದರು.
ಈ ಬಾರಿಯ ಆಳ್ವಾಸ್ ನುಡಿಸಿರಿ ಪುರಸ್ಕೃತರು: ಬಿಷಪ್ ರೈ.ರೆ. ಡಾ. ಹೆನ್ರಿ ಡಿ’ಸೋಜಾ, ನಾಡೋಜ ಡಾ. ಎನ್. ಸಂತೋಷ್ ಹೆಗ್ಡೆ, ಡಾ. ತೇಜಸ್ವಿ ಕಟ್ಟಿàಮನಿ, ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ, ಡಾ. ವಿಜಯಾ ದಬ್ಬೆ, ಪ್ರೊ. ಕೆ.ಬಿ. ಸಿದ್ದಯ್ಯ, ಪ್ರೊ. ಜಿ.ಎಚ್. ಹನ್ನೆರಡುಮಠ,
ಪ್ರೊ. ಬಿ.ಸುರೇಂದ್ರ ರಾವ್, ಡಾ.ಎಂ. ಪ್ರಭಾಕರ ಜೋಶಿ, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಪದ್ಮರಾಜ ದಂಡಾವತಿ, ರತ್ನಮಾಲಾ ಪ್ರಕಾಶ್, ಡಾ. ತೋನ್ಸೆ ವಿಜಯ ಕುಮಾರ್ ಶೆಟ್ಟಿ, ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರಿಗೆ ಈ ಬಾರಿಯ ಆಳ್ವಾಸ್ ನುಡಿಸಿರಿ ಪುರಸ್ಕಾರ ಪ್ರದಾನ ಮಾಡಲಾಗುವುದು.
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಾರ್ಷಿಕ ಆಚರಣೆಯಾಗಿ ನಡೆಸಿಕೊಂಡು ಬರುತ್ತಿರುವ ನಾಡು ನುಡಿ ಸಂಸ್ಕೃತಿಯ ಸಮ್ಮೇಳನ,14ನೇ ವರ್ಷದ ಆಳ್ವಾಸ್ ನುಡಿಸಿರಿ ಡಿಸೆಂಬರ್ 1 ರಿಂದ 3 ರ ವರೆಗೆ ನಡೆಯಲಿದೆ.