ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಚೌಕಿದಾರ್ ಚೋರ್ ಹೈ ಎಂದು ಹೇಳಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಸುಪ್ರೀಂಕೋರ್ಟ್ ಎದುರು ಕ್ಷಮೆಯಾಚಿಸಿದರು.
ಸುಪ್ರೀಂಕೋರ್ಟ್ ನ ತೀರ್ಪನ್ನು ಉಲ್ಲೇಖಿಸಿ, ರಾಹುಲ್ ಗಾಂಧಿ ಚುನಾವಣಾ ಸಮಾವೇಶದಲ್ಲಿ ಚೌಕಿದಾರ್ ಚೋರ್ ಹೈ ಎಂದು ಹೇಳಿದ್ದರು. ಇದರ ವಿರುದ್ಧ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಮೀನಾಕ್ಷಿ ಲೇಖಿ ಅವರು ಅರ್ಜಿ ಸಲ್ಲಿಸಿದ್ದರು.
ಕಳೆದ ವಾರ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದ ಸುಪ್ರೀಂಕೋರ್ಟ್, ಅವರಿಂದ ವಿವರಣೆ ಕೇಳಿತ್ತು.
ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ರಾಜಕೀಯ ಅಭಿಯಾನದ ಸಂದರ್ಭದಲ್ಲಿ ಇದನ್ನು ಹೇಳಲಾಗಿದೆ. ಆದರೆ ಇದನ್ನು ವಿರೋಧ ಪಕ್ಷಗಳು ತಮ್ಮ ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಂಡರು ಎಂದು ಹೇಳಿದ್ದಾರೆ.
ಯಾವುದೇ ಚುನಾವಣಾ ಪ್ರಚಾರ ಭಾಷಣ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ನಾನು ಕೋರ್ಟ್ ನ ಆದೇಶದ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.