Saturday, November 23, 2024
ರಾಜಕೀಯಸುದ್ದಿ

ಚಿಂಚೋಳಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ದಿಢೀರ್ ಬದಲಾವಣೆ – ಕಹಳೆ ನ್ಯೂಸ್

ಧಾರವಾಡ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಈಗ ವಿಧಾನಸಭೆ ಉಪಚುನಾವಣೆ ಕಾವು ಏರಿದೆ. ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಬಿಜೆಪಿಯಲ್ಲಿ ಟಿಕೆಟ್ ಫೈಟ್ ಜೋರಾಗಿದ್ದು ವಿಶೇಷವಾಗಿ ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಿಚಾರ ಎರಡು ಬಣಗಳ ಮಧ್ಯೆ ಅಸಮಾಧಾನ ಹೆಚ್ಚು ಮಾಡಿದೆ.

ಕುಂದಗೋಳದ ಬಿಜೆಪಿ ಟಿಕೆಟ್ ಯಡಿಯೂರಪ್ಪ ಅವರ ಸಂಬಂಧಿ ಚಿಕ್ಕನಗೌಡ ಅವರಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಅವರು ಈಗಾಗಲೇ ಒಂದು ನಾಮಪತ್ರವನ್ನು ಸಲ್ಲಿಸಿಯೂ ಆಗಿದೆ, ಅಧಿಕೃತ ನಾಮಪತ್ರ ಸಲ್ಲಿಕೆ ಇನ್ನೂ ಬಾಕಿ ಇದೆ. ಆದರೆ ಇದು ಅವರ ವಿರೋಧಿ ಬಣದ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿಯ ಮುಖಂಡ ಎಂ.ಆರ್.ಪಾಟೀಲ್ ಅವರೂ ಸಹ ಕುಂದಗೋಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು, ಆದರೆ ಚಿಕ್ಕನಗೌಡ ಅವರಿಗೆ ಟಿಕೆಟ್ ದೊರೆತಿರುವುದು ಅವರಿಗೆ ಮತ್ತು ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದ್ದು, ಬಂಡಾಯದ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕನಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಸಹ ಬಿಜೆಪಿ ಅಭ್ಯರ್ಥಿಯಾಗಿದ್ದರು, ದಿವಂಗತ ಸಿ.ಎಸ್.ಶಿವಳ್ಳಿ ಅವರ ಎದುರು ಕೇವಲ 634 ಮತಗಳ ಅಂತರದಿಂದ ಸೋಲನ್ನಪ್ಪಿದ್ದರು. ಹಾಗಾಗಿ ಅದೇ ಕಾರಣದಿಂದಾಗಿ ಚಿಕ್ಕನಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಸಹ ಎಂ.ಆರ್.ಪಾಟೀಲ್ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅಲ್ಲದೆ, ಆಗ ತಪ್ಪಿದ್ದ ಟಿಕೆಟ್ ಈ ಬಾರಿ ದೊರಕುವುದೆಂಬ ವಿಶ್ವಾಸದಲ್ಲಿ ಅವರಿದ್ದರು ಆದರೆ ಈ ಬಾರಿಯೂ ಸಹ ಬಿಜೆಪಿ ಟಿಕೆಟ್ ಯಡಿಯೂರಪ್ಪ ಅವರ ಸಂಬಂಧಿ ಪಾಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು