Monday, January 20, 2025
ಸುದ್ದಿ

ಉಡುಪಿಗೆ ಆಗಮಿಸಿದ ಸಿಎಂ – ಪಂಚಕರ್ಮ ಸಹಿತ ಆಯುರ್ವೇದ ಚಿಕಿತ್ಸೆ – ಕಹಳೆ ನ್ಯೂಸ್

ಕಳೆದ ವಾರ ಆರ್ಯುವೇದ ಚಿಕಿತ್ಸೆಗಾಗಿ ಕಾಪುವಿಗೆ ಆಗಮಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀಲಂಕಾದಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಕರ್ನಾಟಕದ ಜೆಡಿಎಸ್ ಮುಖಂಡರು ಬಲಿಯಾದ ಹಿನ್ನೆಲೆಯಲ್ಲಿ ಚಿಕಿತ್ಸೆಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ವಾಪಸ್ ಆಗಿದ್ದರು. ಇದೀಗ ಮತ್ತೆ ವಿಶ್ರಾಂತಿಗಾಗಿ ಉಡುಪಿಗೆ ಆಗಮಿಸಿದ್ದು, ಜೊತೆಗೆ ತಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕೂಡಾ ಆಗಮಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಮುಂದೆ ರಸ್ತೆ ಮೂಲಕ ಉಡುಪಿಗೆ ಆಗಮಿಸಿದ್ದು, ಕಾಪುವಿನ ಮೂಳೂರಿನಲ್ಲಿರುವ ಸಾಯಿರಾಧಾ ಹೆಲ್ತ್ ರೆಸಾರ್ಟ್‍ಗೆ ತೆರಳಿ ವಾಸ್ತವ್ಯ ಹೂಡಿದ್ದಾರೆ. ಅವರಿಬ್ಬರು ಇಲ್ಲಿ ನಾಲ್ಕೈದು ದಿನ ಇದ್ದು ಪಂಚಕರ್ಮ ಸಹಿತ ಆಯುರ್ವೇದ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಭೇಟಿಯನ್ನು ಸಂಪೂರ್ಣ ಖಾಸಗಿಯಾಗಿಯೇ ಕಳೆಯಲು ಸಿಎಂ ಬಯಸಿದ್ದಾರೆ. ಹಾಗಾಗಿ ರೆಸಾರ್ಟ್‍ನ ಅಸುಪಾಸಿಗೂ ಯಾರೂ ಬರದಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಚಿತ್ರೀಕರಣಕ್ಕೆ ತೆರಳಿದ್ದ ಮಾಧ್ಯಮದವರಿಗೆ ಪೊಲೀಸರು ಅಡ್ಡಿಪಡಿಸಿದರು. ಸಾರ್ವಜನಿಕ ರಸ್ತೆಯಲ್ಲೂ ನಿಲ್ಲಲು ಅವಕಾಶ ನಿರಾಕರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು