ಮಳೆಗಾಲದ ಮುನ್ನೆಚ್ಚರಿಕೆಗೆ ಎಚ್ ಡಿ ಕುಮಾರಸ್ವಾಮಿ ಸೂಚನೆ: ಖಡಕ್ ಸಂದೇಶ ರವಾನಿಸಿದ ಸಿಎಂ ಕುಮಾರಸ್ವಾಮಿ – ಕಹಳೆ ನ್ಯೂಸ್
ಬೆಂಗಳೂರು: ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೂಚನೆ ನೀಡಿದರು.
ಮುಖ್ಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿಗಳು ಕಳೆದ ವರ್ಷ ಮಳೆಗಾಲದಲ್ಲಿ ಕೊಡಗು ಸೇರಿದಂತೆ ಮಲೆನಾಡು, ಕರಾವಳಿ ಭಾಗಗಳಲ್ಲಿ ಭಾರಿ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಈ ಬಾರಿ ಸಾಮಾನ್ಯ ಮುಂಗಾರು, ರೈತರಿಗೆ ಸಂತಸ ತಂದ ಮುನ್ಸೂಚನೆ
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜನಪ್ರತಿಧಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವಕಾಶ ಇಲ್ಲದ ಕಾರಣ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳ ತಂಡ ರಚಿಸಿ ಈ ಜಿಲ್ಲೆಗಳಲ್ಲಿ ಮುಂಗಾರಿನ ಪೂರ್ವಸಿದ್ಧತೆಯನ್ನು ಪರಿಶೀಲಿಸುವಂತೆ ತಿಳಿಸಿದರು.
ಎಷ್ಟೇ ಮಳೆಯಾದರೂ ಮಂಡ್ಯದ ಶಿಂಷಾನದಿ ತುಂಬಿ ಹರಿಯಲೇ ಇಲ್ಲ!
ಅಲ್ಲದೆ ಕೊಡಗು ಜಿಲ್ಲೆಯಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಅನಾಹುತಗಳ ಹಿನ್ನೆಲೆಯಲ್ಲಿ ಕೈಗೆಟ್ಟಿಕೊಳ್ಳಲಾಗಿರುವ ಮೂಲಸೌಕರ್ಯ ಅಭಿವೃದ್ಧಿ, ದುರಸ್ತಿ ಹಾಗೂ ಪುನರ್ವಸತಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವನ್ನು ಖಾತರಿ ಪಡಿಸಿಕೊಳ್ಳುವಂತೆ ಸೂಚಿಸಿದರು.