ಉತ್ತರ ಕನ್ನಡ: ಖ್ಯಾತ ಕ್ರಿಕೆಟ್ ದಿಗ್ಗಜ, ಲೆಜೆಂಡರಿ ಲೆಗ್ ಸ್ಪಿನ್ನರ್, ಕನ್ನಡಿಗ ಅನಿಲ್ ಕುಂಬ್ಳೆ ದಂಪತಿ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ದಕ್ಷಿಣದ ಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತಾರೆ.
ಅನಿಲ್ ಕುಂಬ್ಳೆ ದಂಪತಿಗಳು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಆತ್ಮಲಿಂಗ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ದೇವಾಲಯದ ಆಡಳಿತಾಧಿಕಾರಿ ಜಿ.ಕೆ ಹೆಗಡೆ ದಂಪತಿಗೆ ಆತ್ಮಲಿಂಗದ ಚಿತ್ರವಿರುವ ಸ್ಮರಣಿಕೆ ನೀಡಿ ಗೌರವಿಸಿದರು.