Monday, January 20, 2025
ಸುದ್ದಿ

Breaking News : ನಾಳೆಯೇ SSLC ಫಲಿತಾಂಶ ; ನಿಮ್ಮ ಫಲಿತಾಂಶ ಎಲ್ಲಿ ಪ್ರಕಟವಾಗುತ್ತೇ ಗೊತ್ತಾ …? – ಕಹಳೆ ನ್ಯೂಸ್

ಬೆಂಗಳೂರು: ಏಪ್ರಿಲ್ 30 ಮಂಗಳವಾರ ಮಧ್ಯಾಹ್ನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸ್ಪಷ್ಟಪಡಿಸಿದ್ದಾರೆ.

ಈ ಮೊದಲು ಮೇ 2ರಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಲಭ್ಯವಾಗಲಿದೆ ಎಂಬ ಮಾಹಿತಿ ಲಭಿಸಿತ್ತು. ಆದರೆ ಈ ಕುರಿತು ಸ್ಪಷ್ಟನೆ ಸಿಕ್ಕಿದ್ದು ಮಧ್ಯಾಹ್ನ 12 ಗಂಟೆಗೆ ಶಿಕ್ಷಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ಆ ಬಳಿಕ ಇಲಾಖೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗೋಷ್ಠಿಯ ಬಳಿಕ ವಿದ್ಯಾರ್ಥಿಗಳು ಇಲಾಖೆಯ ವೆಬ್‍ಸೈಟ್‍ನಲ್ಲಿ ಮಾಹಿತಿ ಪಡೆಯಬಹುದು. ಬುಧವಾರ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 22ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 2,847 ಕೇಂದ್ರಗಳಲ್ಲಿ ಒಟ್ಟು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

” www.karresults.nic.in ಈ ವೆಬ್‍ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ತಿಳಿಯಬಹುದು. “