ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಬಿಟ್ಟು ದೇವರಾಜ ಅರಸು ಜೊತೆ ಹೋಗಿ ಮತ್ತೆ ಪಕ್ಷಕ್ಕೆ ಮರಳಿದವರು, ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದವರು, ಇವರೆಲ್ಲ ದುಡ್ಡು ತೆಗೆದುಕೊಂಡು ಪಕ್ಷ ಬಿಟ್ಟರಾ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಜಾಧವ್ ಪ್ರಜಾಪ್ರಭುತ್ವ ಅಂದರೆ ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಅವರು, ಗವರ್ನಮೆಂಟ್ ಆಫ್ ಮಲ್ಲಿಕಾರ್ಜುನ ಖರ್ಗೆ, ಫಾರ್ ಪ್ರಿಯಾಂಕ್ ಖರ್ಗೆ, ಫಾರ್ ದಿ ಪಿಪಲ್ ಆಫ್ ಪ್ರಿಯಾಂಕ್ ಖರ್ಗೆ, ಇದು ಮಲ್ಲಿಕಾರ್ಜುನ ಖರ್ಗೆಯವರ ಪ್ರಿನ್ಸಿಪಲ್ ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಪದೇ ಪದೆ ಸೇಲ್ ಆಗಿದ್ದಾರಾ ಎಂದು ಕೇಳ್ತಾರೆ. ಅವರು ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಲಿ, ದುಡ್ಡು ಪಡೆದದ್ದು ಪ್ರೂವ್ ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದರು.