Monday, January 20, 2025
ರಾಜಕೀಯಸುದ್ದಿ

ಅಕ್ರಮ ಗಣಿಗಾರಿಕೆ ಪ್ರಕರಣ: ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರಗೆ ಜಾಮೀನು – ಕಹಳೆ ನ್ಯೂಸ್

ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನವಾಗಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರಿಗೆ ಜಾಮೀನು ಸಿಕ್ಕಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯವು ಹಲವು ಬಾರಿ ನಾಗೇಂದ್ರರಿಗೆ ನೋಟಿಸ್ ನೀಡುತ್ತಿತ್ತು.

ಕೋರ್ಟ್ ನೋಟಿಸ್‍ಗೆ ಕ್ಯಾರೇ ಎನ್ನದೇ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರು ತಪ್ಪಿಸಿಕೊಂಡು ತಿರುಗಾಡುತ್ತಿದ್ದರು. ಹಾಗಾಗಿ ಕೋರ್ಟ್ ನಾಗೇಂದ್ರ ಅವರನ್ನು ಬಂಧಿಸಿ ವಿಚಾರಣೆಗೆ ಹಾಜಾರು ಮಾಡುವಂತೆ ಪೊಲೀಸರಿಗೆ ಸೂಚಿಸಿತ್ತು. ಕೋರ್ಟ್‍ನ ಸೂಚನೆ ಮೇರೆಗೆ ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಹಾಜರುಪಡಿಸಿದ್ದರು. ನಾಗೇಂದ್ರ ಅವರನ್ನು ವಿಚಾರಣೆ ಮಾಡಿದ ಬಳಿಕ ಕೋರ್ಟ್ ಜಾಮೀನು ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ಇನ್ನೊಮ್ಮೆ ಹೀಗೆ ಮಾಡದೇ ಸರಿಯಾಗಿ ವಿಚಾರಣೆಗೆ ಹಾಜರಾಗಿ ಎಂದು ಖಡಕ್ಕಾಗಿ ಸೂಚಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪದೇ ಪದೇ ನ್ಯಾಯಾಲಯ ವಿಚಾರಣೆಗೆ ನೀವು ಗೈರಾದರೇ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು