Saturday, November 23, 2024
ಸುದ್ದಿ

ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ : ಧೃಡವಾಗಿರಲಿ ವಿದ್ಯಾರ್ಥಿಗಳ ಮನಸ್ಸು – ಕಹಳೆ ನ್ಯೂಸ್

ಇಂದು 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಎಸ್‍ಎಸ್‍ಎಲ್‍ಸಿ ಬೋರ್ಡ್ ನಿರ್ದೇಶಕಿ ವಿ. ಸುಮಂಗಲಾ 12 ಗಂಟೆಯ ನಂತರ ಸುದ್ದಿಗೋಷ್ಠಿಯ ಮೂಲಕ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಯ ಬಳಿಕ ಪ್ರೌಢ ಶಿಕ್ಷಣ ಮಂಡಳಿಯ ವೆಬ್ ಸೈಟ್ www.kaceb.kar.nic.in ಮತ್ತು www.karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್ ತಿಳಿಸಿದ್ದಾರೆ. ಅಲ್ಲದೆ, ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಎಸ್‍ಎಮ್‍ಎಸ್ ಮೂಲಕ ಫಲಿತಾಂಶ ಕಳುಹಿಸುವ ವ್ಯವಸ್ಥೆಯನ್ನೂ ಮಂಡಳಿ ಮಾಡಿಕೊಂಡಿದೆ. ನಾಳೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. ಒಟ್ಟು 8,41,666 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. 2,847 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. 4,651 ವಿಕಲಚೇತನ ಮಕ್ಕಳು ಪರೀಕ್ಷೆ ಬರೆದಿದ್ದರು. 1451 ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಗೆ ಭಾಷಾ ವಿನಾಯತಿ ನೀಡಲಾಗಿತ್ತು. 480 ಅರ್ಹ ವಿದ್ಯಾರ್ಥಿಗಳಿಗೆ ಗಣಿತ ಹಾಗೂ ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯ ವಿಷಯ ಬರೆಯುವ ಅವಕಾಶ ನೀಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಇತ್ತೀಚಿನ ದಿನಗಳಲ್ಲಿ ಫಲಿತಾಂಶ ಹೊರಬೀಳುತ್ತಿದ್ದಂತೆ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ, ಇದಕ್ಕೆ ಕಲಿಕೆಯ ಒತ್ತಡವು ಮಕ್ಕಳ ಮಾನಸಿಕ ಖಿನ್ನತೆಗೆ ಕಾರಣ ಎಂದು ಮನಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಚ್ಚರಿಯ ವಿಚಾರವೆಂದರೆ ವಿದ್ಯಾರ್ಥಿಗಳ ಆತ್ಮಹತ್ಯೆಯಲ್ಲಿ ಕರ್ನಾಟಕ ಎರಡನೇ ಸ್ಧಾನದಲ್ಲಿದೆ ಅನ್ನುವುದು ದುರಂತ. ಆದ್ದರಿಂದ ಮಕ್ಕಳ ಷೋಷಕರು ಮಕ್ಕಳಿಗೆ ಯಾವುದೇ ರೀತಿಯ ಒತ್ತಡವನ್ನು ಹಾಕದೇ ಅವರಿಗೆ ಸಂಪೂರ್ಣ ಸಹಕಾರವನ್ನ ನೀಡಿ ಮುಂದಿನ ಭವಿಷ್ಯಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಸಿಕೊಡಿಅನ್ನುವುದು ನಮ್ಮ ಕಹಳೆ ನ್ಯೂಸ್‍ನ ಕಳಕಳಿಯ ವಿನಂತಿ.