Saturday, November 23, 2024
ಸುದ್ದಿ

‘ಫನಿ’ ಚಂಡಮಾರುತ ಪರಿಣಾಮ ಕೇರಳದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆ – ಕಹಳೆ ನ್ಯೂಸ್

ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ‘ಫನಿ’ ಚಂಡಮಾರುತವು ಸಮುದ್ರ ಭಾಗದಲ್ಲಿಯೇ ತೀವ್ರತೆ ಹೆಚ್ಚಿಸಿಕೊಳ್ಳುತ್ತಿದ್ದು, ಈ ಪರಿಣಾಮ ಕೇರಳದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕೇರಳದ ವಯನಾಡು, ಮಲಪ್ಪುರಂನಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಫನಿ ಚಂಡಮಾರುತದ ವೇಗ ಮಂಗಳವಾರ ಹೊತ್ತಿಗೆ ಇನ್ನಷ್ಟು ಅಧಿಕವಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಕ್ಕಸ ಗಾತ್ರದ ಅಲೆಗಳು ಸಮುದ್ರದಲ್ಲಿ ಕಂಡು ಬರಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕಳೆದ ರಾತ್ರಿ ಮೂವಟ್ಟುಪುಳಾದಲ್ಲಿ ಭಾರೀ ಗಾಳಿಗೆ ಹಲವು ಮರಗಳು ನೆಲಕ್ಕುರುಳಿದೆ. ಎಂಸಿ ರಸ್ತೆಯಲ್ಲಿ ಮರಗಳು ಅಡ್ಡಲಾಗಿ ಬಿದ್ದು ವಾಹನಗಳ ಸಂಚಾರಕ್ಕೆ ತಡೆ ಉಂಟಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು