Monday, January 20, 2025
ಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ..! – ಕಹಳೆ ನ್ಯೂಸ್

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ೮,೪೧,೬೬೬ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೭೩.೭ ರಷ್ಟು ಫಲಿತಾಂಶ ಬಂದಿದೆ. ಕಳೆದ ಬಾರಿ ಶೇ. ೭೧.೯೩ ಫಲಿತಾಂಶ ಬಂದಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ ೧.೭೭ ರಷ್ಟು ಫಲಿತಾಂಶ ಹೆಚ್ಚಾಗಿದೆ.

ಸರ್ಕಾರಿ ಶಾಲೆಗಳ ಫಲಿತಾಂಶ ಶೇ.೭೭.೮ರಷ್ಟಿದ್ದರೆ, ಅನುದಾನಿತ ಶಾಲೆಗಳ ಫಲಿತಾಂಶ ಶೇ.೭೭.೧೨ ರಷ್ಟಿದ. ಅನುದಾನರಹಿತ ಶಾಲೆಗಳ ಫಲಿತಾಂಶ ಶೇ. ೮೨.೭೨ರಷ್ಟು ಬಂದಿದೆ. ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದು, ಶೇ ೭೯.೫೯ ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಹಾಗೇ ಶೇಕಡ ೬೮.೪೬ ರಷ್ಟು ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಗರ ಪ್ರದೇಶದ ಶೇಕಡಾವಾರು ಫಲಿತಾಂಶ ಶೇ.೭೦.೦೫ ರಷ್ಟಿದೆ, ಗ್ರಾಮೀಣ ಪ್ರದೇಶದ ಫಲಿತಾಂಶ ಶೇ. ೭೬.೬೭ರಷ್ಟಿದೆ. ಇಬ್ಬರು ವಿದ್ಯಾರ್ಥಿಗಳು ೬೨೫ಕ್ಕೆ ೬೨೫ ಅಂಕಗಳನ್ನ ಪಡೆದಿದ್ದಾರೆ. ೧೧ ವಿದ್ಯಾರ್ಥಿಗಳು ೬೨೪ ಅಂಕ ಪಡೆದುಕೊಂಡಿದ್ದಾರೆ. ಜೊತೆಗೆ, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ವಿಭಾಗದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ಹಾಸನಕ್ಕೆ ಮೊದಲ ಸ್ಥಾನ, ರಾಮನಗರಕ್ಕೆ ಎರಡನೇ ಸ್ಥಾನ, ಬೆಂಗಳೂರು ಗ್ರಾಮೀಣ ಮೂರನೇ ಸ್ಥಾನ ಸಿಕ್ಕಿದೆ. ಯಾದಗರಿ ಜಿಲ್ಲೆ ಕೊನೆಯ ಸ್ಥಾನದಲ್ಲಿ ಇದೆ.

www.kaceb.kar.nic.in ಮತ್ತು www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ.