ಬೆಂಗಳೂರು : ರಾಜ್ಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಇಬ್ಬರು ವಿದ್ಯಾರ್ಥಿನಿಯರು ಶೇ 100 ಸಾಧನೆ ಮಾಡಿದ್ದಾರೆ.
ಆನೇಕಲ್ ತಾಲೂಕಿನ ಸೈಂಟ್ ಫಿಲೋಮಿನಾ ಶಾಲೆಯ ಸೃಜನಾ ಮತ್ತು ಉತ್ತರ ಕನ್ನಡದ ಕುಮುಟದ ವಿದ್ಯಾಗಿರಿ ಶಾಲೆಯ ನಾಗಾಂಜಲಿ ನಾಯಕ್ 625ಕ್ಕೆ 625 ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ನಿರ್ಮಿಸಿದ್ದಾರೆ. 11 ವಿದ್ಯಾರ್ಥಿಗಳು 624 ಅಂಕ ಪಡೆದು ವಿಶೇಷ ಸಾಧನೆ ನಿರ್ಮಿಸಿದ್ದಾರೆ.
ಒಟ್ಟು 8.41 ಲಕ್ಷ ವಿದ್ಯಾರ್ಥಿಗಳಲ್ಲಿ 6,08,336 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 2,99,587 ಬಾಲಕರು, 3,08,749 ಬಾಲಕಿಯರು ತೇರ್ಗಡೆಯಾಗಿದ್ದಾರೆ.