ಉಪ್ಪಿನಂಗಡಿ ಶ್ರೀರಾಮ ಪ್ರೌಢಶಾಲೆಗೆ 90.5 ಫಲಿತಾಂಶ ; ಕಾವ್ಯಶ್ರೀ ಮತ್ತು ಅಭಿರಾಮ್ ಭಟ್ ಗಣನೀಯ ಸಾಧನೆ – ಕಹಳೆ ನ್ಯೂಸ್
ಉಪ್ಪಿನಂಗಡಿ : 2019 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಪ್ಪಿನಂಗಡಿಯ ಶ್ರೀರಾಮ ಶಾಲೆ ಶೇಕಡಾ 90.5 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳಲ್ಲಿ 2 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 13 ಪ್ರಥಮ ಶ್ರೇಣಿ, 2 ದ್ವಿತೀಯ ಶ್ರೇಣಿ,2 ತೃತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ” ಕುಮಾರಿ ಕಾವ್ಯಶ್ರೀ 578 ಅಂಕಗಳು ಮತ್ತು ಅಭಿರಾಮ ಭಟ್ .ಎಂ 577 ಅಂಕಗಳನ್ನು ಪಡೆದಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ಕನ್ನಡ ಭಾಷಾ ವಿಷಯದಲ್ಲಿ 125 ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.