Recent Posts

Monday, January 20, 2025
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಧಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹದ ಸಂಭ್ರಮ – ಕಹಳೆ ನ್ಯೂಸ್

ದೇವರ ಸನ್ನಿದಿಯಲ್ಲಿ ಹೂವಿನ ಅಲಂಕಾರ. ಶೃಂಗಾರಗೊಂಡ ಆನೆಗಳು, ಕೊಂಬು, ಕಹಳೆ, ಕಲಶಗಳೊಂದಿಗೆ ದಂಪತಿಗಳ ಸಪ್ತಪಥಿ, ಏಳೇಳು ಜನ್ಮದಲ್ಲಿ ಸತಿ ಪತಿಯರಾಗಿ ಬದುಕನ್ನ ನಡೆಸೋ ಕನಸು ಕಂಡಿರೋ ಮುದ್ದು ಜೋಡಿಗಳು , ಹೌದು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮದುವೆಯ ಸಂಭ್ರಮ ಮನೆ ಮಾಡಿತ್ತು. ಬುಧವಾರ ಸಂಜೆ 6.48ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

102 ಜೋಡಿ ವಧು-ವರರು, ಅವರ ಮನೆಯವರು ಸಂಭ್ರಮದಿಂದ ಉಚಿತ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡರು. ದೇವಳದ ಆವರಣದಿಂದ ವಧು-ವರರನ್ನು ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಕರೆತರಲಾಯಿತು. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವಧು-ವರರು ದೇವಸ್ಥಾನಕ್ಕೆ ಒಂದು ಸುತ್ತು ಬಂದು ಅಲ್ಲಿಂದ ಮೆರವಣಿಗೆಯ ಮೂಲಕ ಸಭಾಭವನದತ್ತ ಹೆಜ್ಜೆ ಹಾಕಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೈದಿಕರ ಮಂಗಳ ವೇದಘೋಷ, ವಾದ್ಯಘೋಷಗಳ ನಡುವೆ . ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 102 ಜೋಡಿ ವಧು-ವರರು ನೂತನ ದಂಪತಿಗಳಾಗಿ ಗ್ರಹಸ್ಥಾಶ್ರಮಕ್ಕೆ ಕಾಲಿಟ್ಟರು. ಭಾನುವಾರ ಸಂಜೆ 6.48ರ ಗೋಧೂಳಿ ಸುಮುಹೂರ್ತದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಖ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥಸ್ವಾಮಿಯ ಅನುಗ್ರಹದೊಂದಿಗೆ ಪ್ರಮಾಣ ವಚನ ಸ್ವೀಕರಿಸಿ ಸತಿಪತಿಗಳಾದರು.

ಶ್ರೀ ಕ್ಷೇತ್ರದಲ್ಲಿ ಇಂದು ಮಂಗಲ ಮುಹೂರ್ತದಲ್ಲಿ ವಧೂ-ವರರಾಗಿ ಪವಿತ್ರ ಬಾಂಧವ್ಯ ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ, ಕಾಮಗಳಲ್ಲಿ ಸಹಚರರಾಗಿ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ ಹಾಗೂ ಯಾವುದೇ ದುರಾಭ್ಯಾಸಗಳಿಗೆ ತುತ್ತಾಗದೆ ಬದುಕುತ್ತೇವೆ ಎಂಬುದಾಗಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಡಾ. ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು.