Recent Posts

Monday, January 20, 2025
ಸಿನಿಮಾಸುದ್ದಿ

ಹಿರಿಯ ರಂಗ ಕಲಾವಿದ, ನಟ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಹಿರಿಯ ರಂಗಭೂಮಿ ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 85 ವರ್ಷದ ಮಾಸ್ಟರ್ ಹಿರಣ್ಣಯ್ಯ, ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

ಹಿರಣ್ಣಯ್ಯ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದು, ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ. ಮಧ್ಯಾಹ್ನ 12 ಗಂಟೆಗೆ ಕುಟುಂಬಸ್ಥರು ಹಿರಣ್ಣಯ್ಯ ಅವರ ಪಾರ್ಥಿವ ಶರೀರವನ್ನು ತ್ಯಾಗರಾಜನಗರದಲ್ಲಿರುವ ಸ್ವಗೃಹಕ್ಕೆ ತರಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿರಣ್ಣಯ್ಯ ಅವರು 1934ರ ಫೆಬ್ರವರಿ 15ರಂದು ಮೈಸೂರಿನಲ್ಲಿ ಜನಿಸಿದರು. ಇವರ ತಂದೆ ಕೆ. ಹಿರಣ್ಣಯ್ಯ ಕೂಡ ನಟ, ನಿರ್ದೇಶಕ ಹಾಗೂ ಕನ್ನಡ ಚಿತ್ರರಂಗದಲ್ಲಿ ಬರಹಗಾರ ಹಾಗೂ ರಂಗ ಕಲಾವಿದರಾಗಿದ್ದರು. ತಮ್ಮ ತಂದೆ ವಿಧಿವಶರಾದ ಬಳಿಕ, ಅವರು ಸ್ಥಾಪಿಸಿದ್ದ ಕೆ. ಹಿರಣ್ಣಯ್ಯ ಮಿತ್ರ ಮಂಡಳಿಯನ್ನು ಮಾಸ್ಟರ್ ಹಿರಣ್ಣಯ್ಯ ತಮ್ಮ ಸುಪರ್ದಿಗೆ ತೆಗೆದುಕೊಂಡರು. ಬಳಿಕ ಕಂಪನಿಯ ಆಡಳಿತದ ಜೊತೆಗೆ ನಟ ಹಾಗೂ ನಿರ್ದೇಶಕರಾದರು.

ಜಾಹೀರಾತು
ಜಾಹೀರಾತು
ಜಾಹೀರಾತು