Tuesday, January 21, 2025
ಸುದ್ದಿ

ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ – ಕಹಳೆ ನ್ಯೂಸ್

ಬೆಂಗಳೂರು: ಹಿರಿಯ ರಂಗ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿಯುವಂಥವು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು. ಅವರ ನಿಧನದಿಂದ ರಂಗಭೂಮಿ ಒಂದು ಅಪೂರ್ವ ರತ್ನವನ್ನು ಕಳೆದುಕೊಂಡಂತಾಗಿದೆ ಎಂದು ಸಿಎಂ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಕುಟುಂಬ ಅಪಾರ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಸಿಎಂ ಹೇಳಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು