Recent Posts

Tuesday, January 21, 2025
ಸುದ್ದಿ

ಫಿಲೋಮಿನಾ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ವಿದಾಯಕೂಟ – ಕಹಳೆ ನ್ಯೂಸ್

ಪುತ್ತೂರು: ಕಲಿಕೆಯು ಮಾನವನ ಜೀವನದುದ್ದಕ್ಕೂ ನಡೆಯುವ ಒಂದು ನಿರಂತರ ಪ್ರಕ್ರಿಯೆ. ಜೀವನವೆಂದರೆ ಒಂದು ದೀರ್ಘತೆರನಾದ ಪ್ರಯಾಣ. ಜೀವನದಲ್ಲಿ ಹಲವಾರು ರೀತಿಯ ಸ್ಥಾನಮಾನಗಳು ಒದಗಿ ಬರಬಹುದು. ಆದರೆ ಅದ್ಯಾವುದೂ ಶಾಶ್ವತವಲ್ಲ ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಹೇಳಿದರು.
ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗವು ಎರಡು ವರ್ಷಗಳ ಸ್ನಾತಕೋತ್ತರ ಶಿಕ್ಷಣವನ್ನು ಮುಗಿಸಿ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಎಪ್ರಿಲ್ 30ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ ವಿದಾಯಕೂಟ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು. ಬೇರೆಯವರ ಬಗ್ಗೆ ತಿಳಿದುಕೊಳ್ಳಲು ಕುತೂಹಲ ಪಡುವ ಬದಲು ನಮ್ಮನ್ನು ನಾವು ಅರ್ಥೈಸಿಕೊಳ್ಳುವ ಮನೋಪ್ರವೃತ್ತಿ ಹೊಂದಿರಬೇಕು. ಇಂತಹ ವಿದಾಯಕೂಟಗಳು ಪ್ರಗತಿಯ ಸ್ವವಿಮರ್ಶೆ ಮಾಡಿಕೊಳ್ಳಲು ಉತ್ತಮ ವೇದಿಕೆಯಾಗಿರುತ್ತದೆ ಎಂದು ಹೇಳಿ, ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯಶಾಸ್ತ್ರ ವಿಭಾಗವು ಅತ್ಯಂತ ಹೆಚ್ಚಿನ ಪ್ರಮಾಣದ ಮಾನವ ಸಂಪನ್ಮೂಲವನ್ನು ಹೊಂದಿದೆ. ಆಸಕ್ತಿದಾಯಕವಾದ ಕಲಿಕೆಯು ಯಾವಾಗಲೂ ಫಲಪ್ರದವಾಗಿರುತ್ತದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ರ್ಯಾಂಕು ಗಳಿಕೆಯ ಕಡೆಗೂ ಪ್ರಬಲ ಗುರಿಯನ್ನು ಹೊಂದಿರಬೇಕು ಎಂದು ಹೇಳಿ, ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಭಾಗದ ಸಂಯೋಜಕ ರಿತೇಶ್ ರೋಡ್ರಿಗಸ್ ಮಾತನಾಡಿ, ವಿಭಾಗದ ಹಿರಿಯ ವಿದ್ಯಾರ್ಥಿಗಳು ಕಿರಿಯರಿಗೆ ಆದರ್ಶಪ್ರಾಯರಾಗಿದ್ದಾಗ ಹೆಚ್ಚಿನ ಪ್ರಗತಿಗೆ ಕಾರಣವಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಪೂರೈಸುವ ಹಂತದಲ್ಲಿ ಧೈರ್ಯ ಮತ್ತು ತಾಳ್ಮೆಯಿಂದ ಮುನ್ನಡೆದಾಗ ಭವಿಷ್ಯದ ಸವಾಲುಗಳನ್ನು ನಿಶ್ಚಿಂತೆಯಿಂದ ಎದುರಿಸಬಹುದು ಎಂದರು.
ಇದೇ ಸಂದರ್ಭದಲ್ಲಿ ‘ಟ್ಯಾಲಿ ಇಆರ್‍ಪಿ 9’ ಸರ್ಟಿಫಿಕೇಟ್ ಕೋರ್ಸ್ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಹಾಗೆಯೇ ವಿದಾಯಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವಂ. ಜಾರ್ಜ್ ಸುನಿಲ್ ಡಿ’ಸೋಜ, ಅವಿನಾ ಮಾಡ್ತಾ ಮತ್ತು ಸೀಮ ಎಮ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿನಿಯರಾದ ಸುಶ್ಮಿತಾ ಮತ್ತು ತಂಡದವರು ಪ್ರಾರ್ಥಿಸಿ, ಶ್ರಾವ್ಯ ಸ್ವಾಗತಿಸಿದರು. ಡಯನಾ ವೇಗಸ್ ವಂದಿಸಿದರು. ಜೊಶೀಲ ಮಿನೇಜಸ್ ಕಾರ್ಯಕ್ರಮ ನಿರೂಪಿಸಿದರು.