ಬೆಂಗಳೂರು : ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ ಅವರು ರಾತ್ರಿ ಪೂರ್ತಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ವಾಸ್ತವ್ಯ ಹೂಡಿದ್ದರು.
ಅವರ ಮಕ್ಕಳಾದ ಚೇತನ ಹಾಗೂ ಕರ್ಣ ಕೂಡ ಅವರೊಂದಿಗೆ ಇದ್ದರು ಎನ್ನಲಾಗಿದೆ. ಅವರನ್ನು 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಪೊಲೀಸರು ಅಲ್ಲಿಯೇ ಅವರ ವಿಚಾರಣೆ ನಡೆಸಿದ್ದಾರೆ. ಒಟ್ಟು ನಾಲ್ಕು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿ ಇರಿಸಲಾಗಿದೆ.
ಇದರಿಂದ ಸದ್ಯಕ್ಕೆ ಬೆಳೆಗೆರೆಗೆ ಬೇಲ್ ಸಿಗುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಬೆಳೆಗೆರೆ ಅವರು ಜಾಮೀನು ಕೋರಿಕೆಯನ್ನೂ ಕೂಡ ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ಅಲ್ಲದೇ ಜೈಲು ವಾರ್ಡ್’ನಲ್ಲಿ ಇರಿಸಲೂ ಕೂಡ ನ್ಯಾಯಾಧೀಶರು ನಿರಾಕರಿಸಿದ್ದಾರೆ.