Recent Posts

Monday, January 20, 2025
ಸಿನಿಮಾಸುದ್ದಿ

ರಜನಿಕಾಂತ್ ಚಿತ್ರದ ಚಿತ್ರೀಕರಣದ ವೇಳೆ ಕಲ್ಲು ತೂರಾಟ, ಶೂಟಿಂಗ್ ರದ್ದು – ಕಹಳೆ ನ್ಯೂಸ್

ದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ನಯನತಾರಾ ಅಭಿನಯನದ ದರ್ಬಾರ್ ಚಿತ್ರದ ಶೂಟಿಂಗ್ ವೇಳೆ ಯುವಕರ ಗುಂಪೊಂದು ಕಲ್ಲು ತುರಾಟ ನಡೆಸಿದ್ದರಿಂದ ಚಿತ್ರೀಕರಣ ನಿಲ್ಲಿಸಲಾಗಿದೆ.

ಮುಂಬೈನಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಕಾಲೇಜ್ ವಿದ್ಯಾರ್ಥಿಗಳ ಗುಂಪೊಂದು ಸೆಟ್‍ನಲ್ಲಿ ತಮ್ಮ ಮೊಬೈಲ್‍ಗಳಲ್ಲಿ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯುತ್ತಿತ್ತು. ಈ ವೇಳೆ ಇದನ್ನು ಗಮನಿಸಿದ ಚಿತ್ರ ತಂಡದ ಸಿಬ್ಬಂದಿ ಫೋಟೋ ತೆಗೆಯದಂತೆ ತಾಕೀತು ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ಕೆರಳಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದ್ದು ಉದ್ರಿಕ್ತಗೊಂಡ ವಿದ್ಯಾರ್ಥಿಗಳು ಶೂಟಿಂಗ್ ಸೆಟ್‍ನ ಮೇಲೆ ಕಲ್ಲು ತುರಾಟ ನಡೆಸಿದ್ದಾರೆ. ಈ ವೇಳೆ ಚಿತ್ರದ ನಿರ್ದೇಶಕ ಎ.ಆರ್. ಮುರುಗದಾಸ್ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಅಲ್ಲದೇ ಶೂಟಿಂಗ್ ಸ್ಥಳವನ್ನು ಸ್ಥಳಾಂತರ ಮಾಡಿದ್ದಾರೆ. ದರ್ಬಾರ್ ಚಿತ್ರದಲ್ಲಿ ರಜನಿಕಾಂತ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ಎ.ಆರ್.ಮುರುಗದಾಸ್ ಹಾಗೂ ರಜನಿಕಾಂತ್ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ರಜನಿಕಾಂತ್ ಜೊತೆ ಚಂದ್ರಮುಖಿ, ಕುಸೇಲನ್ ಚಿತ್ರಗಳಲ್ಲಿ ಆ್ಯಕ್ಟ್ ಮಾಡಿದ್ದ ನಯನತಾರ ಮತ್ತೊಮ್ಮೆ ಜೋಡಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು