Monday, January 20, 2025
ಸುದ್ದಿ

ಹತ್ತನೇ ತರಗತಿ ಫೇಲ್ : ಬಾಲಕ ನೇಣಿಗೆ ಶರಣು – ಕಹಳೆ ನ್ಯೂಸ್

ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ತೋಳೂರುಶೆಟ್ಟಳ್ಳಿ ಲಲಿತಾದ್ರಿ ಕಾಫಿ ತೋಟದಲ್ಲಿ ರೈಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಅರ್ಜುನ್ ಅವರ ಪುತ್ರ ಭುವನ್(16) ನೇಣಿಗೆ ಶರಣಾದವ ಬಾಲಕ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಫಿ ತೋಟದ ತನ್ನ ಮನೆಯ ಅಟ್ಟದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಪಟ್ಟಣದ ಖಾಸಗಿ ಶಾಲೆಯಲ್ಲಿ ಪರೀಕ್ಷೆ ಬರೆದಿದ್ದ, ಫಲಿತಾಂಶ ಬಂದ ಮೇಲೆ, ಕುಗ್ಗಿ ಹೋಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಸೋಮವಾರಪೇಟೆ ಠಾಣಾಧಿಕಾರಿ ಶಿವಶಂಕರ್ ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು