Monday, January 20, 2025
ರಾಜಕೀಯಸುದ್ದಿ

ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾಗಿ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ : ಬಿಜೆಪಿ – ಕಹಳೆ ನ್ಯೂಸ್

ನವದೆಹಲಿ: ಯುಪಿಎ ಅವಧಿಯಲ್ಲಿ ನಾವೂ ಕೂಡಾ 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೆವು ಎಂಬ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಹೇಳಿಕೆಗೆ ಸಚಿವ ಪ್ರಕಾಶ್ ಜಾವ್ಡೇಕರ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‍ನ ಸರ್ಜಿಕಲ್ ಸ್ಟ್ರೈಕ್ ವಿಚಾರ ಸುಳ್ಳಿನ ಕಂತೆ ಎಂದು ಅವರು ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿದ್ದ ಯುಪಿಎ ಸರ್ಕಾರ 6 ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದೆ.

ಈ ಮೂಲಕ ನಮ್ಮ ಅವಧಿಯಲ್ಲೂ ಉಗ್ರರ ಹೆಡೆಮುರಿ ಕಟ್ಟಿದ್ದೇವೆ. ಆದ್ರೆ ನಾವು ಅದರಿಂದ ರಾಜಕೀಯ ಲಾಭ ಪಡೆದುಕೊಂಡಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರವು ಸೈನ್ಯದ ಶೌರ್ಯವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿದೆ ಎಂದು ದೂರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು