ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಹುಂಡಿಹಣವನ್ನು ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ವಿದೇಶಿ ಹಾಗೂ ನಿಷೇಧಿತ ನೋಟುಗಳು ಸಿಕ್ಕಿವೆ. ಹುಂಡಿಯಲ್ಲಿ 28,18,831 ರುಪಾಯಿ ಸಂಗ್ರಹವಾಗಿದೆ. ಇದರೊಂದಿಗೆ 2 ಗ್ರಾಂ ಚಿನ್ನ, 1,250 ಕೆ.ಜಿ ಬೆಳ್ಳಿ ಹುಂಡಿಯಲ್ಲಿ ಸಿಕ್ಕಿದೆ.
ಅಮೆರಿಕ, ಮಲೇಷ್ಯಾ, ಯೂರೋಪ್ ದೇಶಗಳ ವಿದೇಶಿ ನೋಟುಗಳು ಸಿಕ್ಕಿವೆ. ಇದರೊಂದಿಗೆ ನಿಷೇಧಿತ 500ರ 23 ನೋಟುಗಳನ್ನು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ಮುಜರಾಯಿ ತಹಶೀಲ್ದಾರ್ ಕೆ.ಪದ್ಮ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗನ್ನಾಥಾಚಾರ್ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.