Tuesday, January 21, 2025
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕು. ಸಿಂಚನಾಲಕ್ಷ್ಮಿರವರಿಗೆ ಅಭಿನಂದನೆ – ಕಹಳೆ ನ್ಯೂಸ್

2018-19 ಸಾಲಿನ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಸಿಂಚನಾಲಕ್ಷ್ಮಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಮತ್ತು ಶಿಕ್ಷಣ ಇಲಾಖೆಯಿಂದ ಅಭಿನಂದಿಸಲಾಯಿತು.

ಕಾಲೇಜಿನ ಸಂಚಾಲಕ ಸಂತೋಷ್ ಬಿ ಮತ್ತು ಶಿಕ್ಷಣ ಇಲಾಖೆಯ ಪರವಾಗಿ ತಹಶೀಲ್ದಾರ್ ಡಾ| ಪ್ರದೀಪ್ ಕುಮಾರ್ ಸಿಂಚನಾಲಕ್ಷ್ಮಿ ಅವರನ್ನು ಅಭಿನಂದಿಸಿದರು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಸಿಂಚನಾಲಕ್ಷ್ಮಿ ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಂದುವರಿಸಿ ವಿಜ್ಞಾನ ಕ್ಷೇತ್ರದಲ್ಲಿ ಪಿಸಿಯಂಬಿ ಯನ್ನು ಆಯ್ಕೆಮಾಡಿ , ವೈದ್ಯಕೀಯ ವಿದ್ಯಾಭ್ಯಾಸ ಪಡೆದು ವೈದ್ಯಳಾಗುವ ಗುರಿಯನ್ನು ಹೊಂದಿದ್ದೇನೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರ ಇಲಾಖೆಯ ದೈಹಿಕ ಶಿಕ್ಷಣ ಪರವೀಕ್ಷಕ ಸುಂದರಗೌಡ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಗುರು ಸತೀಶ್ ರೈ, ಕಾಲೇಜಿನ ಪ್ರಾಂಶುಪಾಲ ಡಾ| ಸಿ ಕೆ. ಮಂಜುನಾಥ್, ಸಿಂಚನಾಲಕ್ಷ್ಮಿಯ ತಂದೆ ಮುರಳೀಧರ ಭಟ್ ಬಂಗಾರಡ್ಕ ಮತ್ತು ತಾಯಿ ಶೋಭಾ ಎಂ.ಬಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು