Monday, January 20, 2025
ಸುದ್ದಿ

ತೆಲಂಗಾಣಕ್ಕೆ 2.5 ಟಿಎಂಸಿ ನೀರು ಬಿಡಲು ರಾಜ್ಯ ಸರ್ಕಾರ ಒಪ್ಪಿಗೆ – ಕಹಳೆ ನ್ಯೂಸ್

ಹೈದ್ರಾಬಾದ್: ತೆಲಂಗಾಣದ ಮೆಹಬೂಬ್‍ನಗರದ ಪ್ರದೇಶಗಳಿಗೆ ಕುಡಿಯುವ ನೀರು ಕಲ್ಪಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕದ ನಾರಾಯಣಪುರ ಜಲಾಶಯದಿಂದ 2.50 ಟಿಎಂಸಿ ನೀರು ಬಿಡಲು ಸಿಎಂ ಕುಮಾರಸ್ವಾಮಿ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಜೊತೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ದೂರವಾಣಿ ಮೂಲಕ ಮನವಿ ಮಾಡಿದ್ದರು.

ತೆಲಂಗಾಣದ ಜುರಲಾ ಜಲಾಶಯಕ್ಕೆ ಈ ನೀರು ಬಿಡಲಾಗುತ್ತೆ. ಬಳಿಕ ಮೆಹಬೂಬ್‍ನಗರದ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಕಲ್ಪಿಸಲಾಗುವುದಾಗಿ ಅಲ್ಲಿನ ಸರ್ಕಾರ ಹೇಳಿದೆ. ಈಗಾಗಲೇ ಮೆಹಬೂಬ್‍ನಗರದ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದೆ. ಹೀಗಾಗಿ ಎರಡು ರಾಜ್ಯದ ಮುಖ್ಯಮಂತ್ರಿಗಳು ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣ ರಾಜ್ಯದ ಸ್ನೇಹ ಸಂಬಂಧ ಗಟ್ಟಿಯಾಗಿರುವುದರಿಂದ ನೀರು ಬಿಡಲು ಒಪ್ಪಿಗೆ ಸೂಚಿಸಲಾಗಿದೆ. ಇನ್ನು, ರಾಜ್ಯ ಸರ್ಕಾರದ ಈ ನೆರವಿಗೆ ಅಲ್ಲಿನ ಸಿಎಂ ಕೆಸಿಆರ್ ಧನ್ಯವಾದಗಳನ್ನು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು