Recent Posts

Monday, January 20, 2025
ಸುದ್ದಿ

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಜಾನಕಿ – ಕಹಳೆ ನ್ಯೂಸ್

ಮೈಸೂರು: ಗಾನ ಕೋಗಿಲೆ ಎಸ್. ಜಾನಕಿ ಅವರ ಬಗ್ಗೆ ಹೇಳಬೇಕೆಂದರೆ ಮಹಾಸಾಗರದ ಆಳವನ್ನು ಅರಸಿ ಹೊರಟಂತೆ. ಅವರ ಹಾಡುಗಳ ಬಗ್ಗೆ ಹೇಳುವಾಗ ಈ ಕ್ಷಣಕ್ಕೆ ಬಂದ ನೆನಪುಗಳನ್ನು ಹೇಳಬಹುದೇ ವಿನಃ ಅವರು ಹಾಡಿರುವ ಶ್ರೇಷ್ಠ ಗೀತೆಗಳ ಒಂದು ಸಣ್ಣ ಅಳತೆಯನ್ನು ಕೂಡಾ ನಾವು ಕ್ರಮಿಸಲಾರೆ ವೇನೋ.

ಸೊಂಟ ಮುರಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ

ಜಾಹೀರಾತು
ಜಾಹೀರಾತು
ಜಾಹೀರಾತು

ಈಗ ಎಸ್ ಜಾನಕಿ ಸೊಂಟ ಮುರಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಸ್.ಜಾನಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿರುವ ಎಸ್. ಜಾನಕಿ ಸಂಬಂಧಿಕರ ಮನೆಗೆ ಬಂದಿದ್ದಾಗ ಬಿದ್ದು ಸೊಂಟ ಮುರಿದುಕೊಂಡಿದ್ದರು. ಎಸ್ ಜಾನಕಿ ಅವರಿಗೆ ಈಗ ಸುಮಾರು 80 ವರ್ಷ ವಯಸ್ಸಾಗಿದ್ದು, ಸುಮಾರು 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ನಾಲ್ಕು ಬಾರಿ ತಮ್ಮ ಹಾಡಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು