Recent Posts

Monday, January 20, 2025
ಸುದ್ದಿ

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೃತಜ್ಞತಾ ಸಭೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ದುಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ನಾಯಕರು ಮತ್ತು ಕಾರ್ಯಕರ್ತರಿಗೆ ಮಿಥುನ್ ರೈ ಮತ್ತು ಶಕುಂತಲಾ ಶೆಟ್ಟಿಯವರಿಂದ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇಂದು ಬೆಳಿಗ್ಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

18/4/19 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ರಾತ್ರಿ ಹಗಲೆನ್ನದೆ ದುಡಿದ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರಿಗೆ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮಿಥುನ್ ರೈ ಮತ್ತು ಶಕುಂತಲಾ ಶೆಟ್ಟಿ ಯವರಿಂದ ಕೃತಜ್ಞತೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಪುತ್ತೂರು ಬ್ಲಾಕ್ ನ ಎಲ್ಲಾ ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಬಿಯಲ್ಎಗಳು ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.