Sunday, January 19, 2025
ಸುದ್ದಿ

ಹಣಕಾಸು ವಿಚಾರವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ – ಕಹಳೆ ನ್ಯೂಸ್

ಬೆಂಗಳೂರು– ಹಣಕಾಸು ವಿಚಾರವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಕೆಜಿ ಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಎಚ್‍ಬಿಆರ್ ಲೇಔಟ್ ನಿವಾಸಿ ಸೈಯದ್ ಜುಬೇರ್ (43) ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉದ್ಯಮಿ.

ನಿನ್ನೆ ರಾತ್ರಿ 10 ಗಂಟೆ ಸಮಯದಲ್ಲಿ ಸೈಯದ್ ಜುಬೇರ್ ಮನೆ ಬಳಿ ನಿಂತಿದ್ದಾಗ ಬೈಕ್‍ನಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ಸೈಯದ್ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ. ಕುಸಿದು ಬಿದ್ದ ಸೈಯದ್‍ನನ್ನು ನೆರೆಹೊರೆಯವರು ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವೈದ್ಯರು ಸೈಯದ್ ಹೊಟ್ಟೆಯಲ್ಲಿ ಹೊಕ್ಕಿದ್ದ ಎರಡು ಗುಂಡುಗಳ ಪೈಕಿ ಒಂದು ಗುಂಡನ್ನು ಶಸ್ತ್ರ ಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. ಈ ಬಗ್ಗೆ ಕೆಜಿ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು