Saturday, September 14, 2024
ಸುದ್ದಿ

ಜಾರಿ ಬಿದ್ದು ಸೊಂಟದ ಮೂಳೆ ಮುರಿದು ಆಸ್ಪತ್ರೆಗೆ ದಾಖಲಾದ ಗಾಯಕಿ ಎಸ್.ಜಾನಕಿ – ಕಹಳೆ ನ್ಯೂಸ್

ಮೈಸೂರು: ಖ್ಯಾತ ಗಾಯಕಿ ಎಸ್.ಜಾನಕಿ ಅವರು ಮೈಸೂರು ನಗರದ ಸಂಬಂಧಿಕರ ಮನೆಗೆ ಬಂದಿದ್ದಾಗ ಜಾರಿ ಬಿದ್ದು ಸೊಂಟದ ಮೂಳೆ ಮುರಿದಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ವಾರದ ಹಿಂದೆಯೇ ಜಾನಕಿ ಮೈಸೂರಿನ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಶುಕ್ರವಾರ ಜಾರಿ ಬಿದ್ದು ಸೊಂಟದ ಮೂಳೆ ಮುರಿದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಮುಂದುವರೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು