ರಾಜ್ಯದಲ್ಲಿ ತೀವ್ರ ಬರಗಾಲದಿಂದ ಕೃಷ್ಣಾ ನದಿಯಲ್ಲಿ ನೀರಿನ ಕೊರತೆ ಉಂಟಾಗಿ ಕುಡಿಯುವ ನೀರಿಗೆ ಅಭಾವ ಉಂಟಾಗಿದ್ದು. ಈ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದು ಮನವಿ ಮಾಡಲಾಗಿತ್ತು.
ಈ ಸಂಬಂಧ ಮಹಾರಾಷ್ಟ್ರ ಸರ್ಕಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿದ್ದು, ಇನ್ನೆರಡು ದಿನಗಳಲ್ಲಿ ಕೃಷ್ಣಾ ನದಿಗೆ ನೀರು ಹರಿದುಬರುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಲು ಸಮ್ಮತಿಸಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆತಂತಾಗುತ್ತದೆ ಎಂದಿದ್ದಾರೆ.