Monday, November 18, 2024
ಸುದ್ದಿ

ಮಂಡ್ಯದಲ್ಲಿ ಮತದಾನ ಮುಗಿದರು, ಮುಂದುವರಿದ ದ್ವೇಷದ ಬೆಂಕಿ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆ ಅಬ್ಬರ ಮುಗಿದು ಚುನಾವಣಾ ಫಲಿತಾಂಶಕ್ಕಾಗಿ ಕಾಯತ್ತಿರುವ ಈ ಸಂದರ್ಭದಲ್ಲಿಯು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಆರೋಪ-ಪ್ರತ್ಯಾರೋಪಗಳು ನಿಂತಿಲ್ಲ. ಮಂಡ್ಯ ಜಿಲ್ಲಾ ಕಾಂಗ್ರೆಸ್‍ನ ಕೆಲ ನಾಯಕರು ಹಾಗೂ ಜೆಡಿಎಸ್ ಮುಖಂಡರ ಮಧ್ಯೆ ಮಾತಿನ ಜಟಾಪಟಿ ಇನ್ನಿ ಆರಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೌದು, ಮಂಡ್ಯ ಜಿಲ್ಲೆಯಲ್ಲಿ ಕೆಲವು ಕಾಂಗ್ರೆಸ್ ನಾಯಕರು ಓರ್ವ ಮಹಿಳೆಯನ್ನು ಮುಂದಿಟ್ಟುಕೊಂಡು ಶಿಖಂಡಿ ರಾಜಕಾರಣ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಮೂಲ ಕಾಂಗ್ರೆಸ್ಸಿಗರು ಮಾತ್ರ ಮೈತ್ರಿ ಪಾಲನೆ ಮಾಡಿದ್ದಾರೆ. ಇತ್ತೀಚೆಗೆ ಪಕ್ಷ ಸೇರಿದವರು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದು ಜೆಡಿಎಸ್ ಶಾಸಕ ಸುರೇಶ್‍ಗೌಡ ಕೆಲವು ದಿನಗಳ ಹಿಂದೆ ಹೇಳಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು ಮಾತಿಗೆ ಸುಮಲತಾ ಬೆಂಬಲಿಗ ಬೇಲೂರು ಸೋಮಶೇಖರ್ ತಿರುಗೇಟು ನೀಡಿದ್ದಾರೆ. ರಮ್ಯಾ ಅವರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಿದ ಸುರೇಶ್ ಗೌಡರನ್ನು ಏನೆಂದು ಕರೆಯಬೇಕು? ಜೆಡಿಎಸ್‍ನವರು ಮಹಿಳೆಯರ ಬಗ್ಗೆ ಅಗೌರವವಾಗಿ ಮಾತನಾಡುತ್ತಿದ್ದಾರೆ. ಈ ರೀತಿಯ ಪದ ಬಳಕೆ ಮಾಡುವುದನ್ನು ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.. ಮಾಜಿ ಸಂಸದೆ ರಮ್ಯಾ ಅವರನ್ನು ಮುಂದಿಟ್ಟು ರಾಜಕೀಯ ಮಾಡಿದ್ದರು. ಆಗ ತಾನು ಶಿಂಖಡಿ ರಾಜಕಾರಣ ಮಾಡುತ್ತಿದ್ದೇನೆ ಅಂತ ತಿಳಿಯಲಿಲ್ಲವೇ ಎಂದಿದ್ದಾರೆ.